Karnataka Lokayukta
Karnataka Lokayukta

ಕಲಂ 4 (1) (ಬಿ) ರ ಅಡಿಯಲ್ಲಿ ಕಡತಗಳ ವಿಷಯಾನುಕ್ರಮಣಿಕೆ ಮತ್ತು ವಿಷಯಸೂಚಿ.

I. ಸಂಸ್ಥೆಯ ರಚನೆ, ಕಾರ್ಯಗಳು ಮತ್ತು ಕರ್ತವ್ಯಗಳ ವಿವರಗಳು.
II. ಸಂಸ್ಥೆಯ ಅಧಿಕಾರಿಗಳ ಮತ್ತು ನೌಕರರ ಅಧಿಕಾರಗಳು ಹಾಗೂ ಕರ್ತವ್ಯಗಳು.
III. ಮೇಲ್ವಿಚಾರಣೆ ಮತ್ತು ಹೊಣೆಗಾರಿಕೆಯ ಮಾರ್ಗಗಳು ಸೇರಿದಂತೆ ತೀರ್ಮಾನ ತೆಗೆದುಕೊಳ್ಳುವ ಪ್ರಕ್ರಿಯೆಯಲ್ಲಿ ಅನುಸರಿಸಬೇಕಾದ ಕಾರ್ಯವಿಧಾನ.
IV. ಸಂಸ್ಥೆಯ ಕಾರ್ಯಗಳ ನಿರ್ವಹಣೆಗೆ ರೂಪಿಸಿರುವ ಸೂತ್ರಗಳು.
V. ಸಂಸ್ಥೆಯ ಕಾರ್ಯಗಳನ್ನು ನೆರವೇರಿಸುವುದಕ್ಕಾಗಿ ಹೊಂದಿರುವ ಅಥವಾ ನಿಯಂತ್ರಣದಲ್ಲಿರುವ ಅಥವಾ ಉದ್ಯೊಗಿಗಳು ಬಳಸುವ ನಿಯಮಗಳು, ವಿನಿಮಯಗಳು, ಅನುಸೂಚಿಗಳು, ಕೈಪಿಡಿಗಳು ಮತ್ತು ದಾಖಲೆಗಳು.
VI. ಸಂಸ್ಥೆ ಹೊಂದಿರುವ ಅಥವಾ ನಿಯಂತ್ರಣದಲ್ಲಿರುವ ದಸ್ತಾವೇಜುಗಳ ಪ್ರವರ್ಗಗಳ ವಿರವ ಪಟ್ಟಿ.
VII. ಸಂಸ್ಥೆಯ ಕಾರ್ಯನೀತಿಯ ರಚನೆ ಅಥವಾ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರೊಡನೆ ಸಮಾಲೋಚಿಸಲು ಅಥವಾ ಪ್ರಾಥಿನಿಧ್ಯವಿರುವಂತೆ ಮಾಡಲು ಇರುವಂಥ ಯಾವುದೇ ವ್ಯವಸ್ಥೆಯ ವಿವರಗಳು.
VIII. ಮಂಡಳಿಗಳು, ಪರಿಷತ್ತುಗಳು, ಸಮಿತಿಗಳು ಅಥವಾ ಇತರೆ ನಿಕಾಯಗಳು ಮತ್ತು ಅದರ ಭಾಗವಾಗಿ ಅಥವಾ ಅದರ ಸಲಹೆಯ ಉದ್ದೇಶಕ್ಕಾಗಿ ರಚಿತವಾದ ಇಬ್ಬರು ಅಥವಾ ಹೆಚ್ಚು ವ್ಯಕ್ತಿಗಳನ್ನೊಳಗೊಂಡ ಮಂಡಳಿಗಳ, ಪರಿಷತ್ತುಗಳ, ಸಮಿತಿಗಳ ಮತ್ತು ಇತರೆ ನಿಕಾಯಗಳ ಸಭೆಗಳು ಸಾರ್ವಜನಿಕರಿಗೆ ಮುಕ್ತವಾಗಿರುತ್ತವೆಯೇ ಅಥವಾ ಅಂತಹ ಸಭೆಗಳ ನಡಾವಳಿಗಳು ಸಾರ್ವಜನಿಕರಿಗೆ ದೊರೆಯುತ್ತವೆಯೇ ಎಂಬುದರ ವಿವರ ಪಟ್ಟಿ.
IX. ಸಂಸ್ಥೆಯ ಅಧಿಕಾರಿಗಳ ಮತ್ತು ನೌಕರರನ್ನು ಸಂಪರ್ಕಿಸುವ ವಿವರ.
X. ಸಂಸ್ಥೆಯ ನಿಯಮಗಳಲ್ಲಿ ಉಪಬಂಧಿಸಿರುವಂತೆ ಪರಿಹಾರದ ವ್ಯವಸ್ಥೆಯು ಸೇರಿದಂತೆ ಅದರ ಪ್ರತಿಯೊಬ್ಬ ಅಧಿಕಾರಿ ಮತ್ತು ನೌಕರರು ಪಡೆಯುವ ತಿಂಗಳ ಗೌರವಧನ.
XI. ಎಲ್ಲಾ ಯೋಜನೆಗಳ ವಿವರಗಳನ್ನು ಸೂಚಿಸುವ, ಪ್ರಸ್ತಾವಿತ ವೆಚ್ಚಗಳನ್ನು ಮತ್ತು ಮಾಡಲಾದ ಬಟವಾಡೆಗಳ ವರದಿಯನ್ನು ಸೂಚಿಸಿ; ಅದರ ಪ್ರತಿಯೊಂದು ಏಜೆನ್ಸಿಗೆ ಹಂಚಿಕೆ ಮಾಡಲಾದ ಆಯವ್ಯಯ.
XII. ಹಂಚಿಕೆ ಮಾಡಲಾದ ಮೊಬಲಗನ್ನೊಳಗೊಂಡು, ಸಹಾಯಧನ ಕಾರ್ಯಕ್ರಮಗಳ ಜಾರಿಯ ವಿಧಾನವನ್ನು ಮತ್ತು ಅಂತಹ ಕಾರ್ಯಕ್ರಮಗಳ ಫಲಾನುಭವಿಗಳ ವಿವರಗಳು.
XIII. ಸಂಸ್ಥೆ ನೀಡಿರುವ ರಿಯಾಯಿತಿಗಳನ್ನು, ಅನುಮತಿ ಪತ್ರಗಳನ್ನು ಅಥವಾ ಅಧಿಕಾರ ಪತ್ರಗಳನ್ನು ಪಡೆಯುವವರ ವಿವರಗಳು.
XIV. ಸಂಸ್ಥೆ ಬಳಿ ಲಭ್ಯವಿರುವ ಅಥವಾ ಅದು ಹೊಂದಿರುವ ವಿದ್ಯುನ್ಮಾನ ರೂಪಕ್ಕೆ ಪರಿವರ್ತಿಸಿರುವ, ಮಾಹಿತಿಗೆ ಸಂಬಂಧಿಸಿದ ವಿವರಗಳು.
XV. ಸಾರ್ವಜನಿಕ ಉಪಯೋಗಕ್ಕಾಗಿ ಗ್ರಂಥಾಲಯವನ್ನು ಅಥವಾ ವಾಚನಾಲಯವನ್ನು ನಿರ್ವಹಿಸುತ್ತಿದ್ದಲ್ಲಿ ಅದರ ಕೆಲಸದ ಸಮಯವನ್ನೊಳಗೊಂಡಂತೆ ಮಾಹಿತಿ ಪಡೆಯಲು ಸಾರ್ವಜನಿಕರಿಗೆ ಲಭ್ಯವಿರುವ ಸೌಲಭ್ಯಗಳ ವಿವರಗಳು.
XVI. ಸಾರ್ವಜನಿಕ ಮಾಹಿತಿ ಅಧಿಕಾರಿಗಳ ಹೆಸರುಗಳು, ಪದನಾಮಗಳು ಇತರೆ ವಿವರಗಳು.
XVII. ನಿಯಮಿಸಬಹುದಾದಂತಹ ಇತರ ಮಾಹಿತಿ.